ಕೊರೊನಾ ಪಾಸಿಟಿವ್ ಬಂದ ಮೂವರು, 3 ದಿನದಿಂದ ನಾಪತ್ತೆ..! ಎಲ್ಲಿ?

ಮೈಸೂರು: ರಾಜ್ಯದಲ್ಲಿ ಕರೋನಾ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯಿಂದ ಎಲ್ಲರಿಗೂ ಚಿಕಿತ್ಸೆ ನೀಡುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೆ ಮೈಸೂರಿನಲ್ಲಿ ಇದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ. ಮೈಸೂರು ನಗರದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದ ಮೂವರು ಸೋಂಕಿತರನ್ನು ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಸೋಂಕಿತರು ಆಸ್ಪತ್ರೆಯಿಂದ ಪರಾರಿಯಾಗಿದ್ದು ನಗರದ ಜನರಲ್ಲಿ ಆತಂಕ ಉಂಟುಮಾಡಿದೆ. ಸೋಂಕಿತರು ನೀಡಿರುವ ವಿಳಾಸವು ತಪ್ಪಾಗಿದ್ದು, ಮೊಬೈಲ್ ನಂಬರ್ ಸಹ […]

ಕೊರೊನಾ ಪಾಸಿಟಿವ್ ಬಂದ ಮೂವರು, 3 ದಿನದಿಂದ ನಾಪತ್ತೆ..! ಎಲ್ಲಿ?
ಪ್ರಾತಿನಿಧಿಕ ಚಿತ್ರ
Edited By:

Updated on: Jul 25, 2020 | 8:10 PM

ಮೈಸೂರು: ರಾಜ್ಯದಲ್ಲಿ ಕರೋನಾ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯಿಂದ ಎಲ್ಲರಿಗೂ ಚಿಕಿತ್ಸೆ ನೀಡುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೆ ಮೈಸೂರಿನಲ್ಲಿ ಇದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ.

ಮೈಸೂರು ನಗರದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದ ಮೂವರು ಸೋಂಕಿತರನ್ನು ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಸೋಂಕಿತರು ಆಸ್ಪತ್ರೆಯಿಂದ ಪರಾರಿಯಾಗಿದ್ದು ನಗರದ ಜನರಲ್ಲಿ ಆತಂಕ ಉಂಟುಮಾಡಿದೆ.

ಸೋಂಕಿತರು ನೀಡಿರುವ ವಿಳಾಸವು ತಪ್ಪಾಗಿದ್ದು, ಮೊಬೈಲ್ ನಂಬರ್ ಸಹ ಸ್ವಿಚ್ ಆಫ್ ಆಗಿದೆ. ಈ ಮಾಹಿತಿಯನ್ನು ಸ್ಥಳೀಯ ಕಾರ್ಪೊರೇಟರ್ ಬಿ ವಿ ಮಂಜುನಾಥ್ ಬಹಿರಂಗಪಡಿಸಿದ್ದು, ಸೋಂಕಿತರಿಗಾಗಿ ತೀವ್ರ ಹುಡುಕಾಟ ಶುರುವಾಗಿದೆ.

Published On - 2:23 pm, Fri, 24 July 20