20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ […]
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಹೆದ್ದಾರಿಯ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ಹಾನಿಯುಂಟಾಗಿದೆ.