
ಬೆಂಗಳೂರು: IMA ಸಂಸ್ಥೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸದಂತೆ CBIನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಮೂವರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದ್ದು CID Dy. SPಆಗಿದ್ದ E.B.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ರಮೇಶ್ ಮತ್ತು SI ಆಗಿದ್ದ ಗೌರಿಶಂಕರ್ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅವರಿಬ್ಬರ ವಿರುದ್ದ ಕ್ರಮ ಯಾಕಿಲ್ಲಾ?
ಪ್ರಕರಣದಲ್ಲಿ ಹೇಮಂತ್ ನಿಬಾಳ್ಕರ್ ಮತ್ತು ಅಜಯ್ ಹಿಲೋರಿ ಅವ್ರ ವಿರುದ್ದವೂ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಆದ್ರೆ ಈ ಇಬ್ಬರು ಅಧಿಕಾರಿಗಳ ವಿರುದ್ದ ಕ್ರಮ ಯಾಕಿಲ್ಲಾ? ಎನ್ನುವ ಮಾತುಗಳು ಕೇಳಿ ಬರ್ತಿದೆ.
Published On - 2:12 pm, Mon, 19 October 20