ಕಾವೇರಿ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಮಂಡ್ಯ: ಸ್ನಾನಕ್ಕೆಂದು ಕಾವೇರಿ ನದಿಗಿಳಿದಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಶಂಭುಲಿಂಗಯ್ಯನ ಕಟ್ಟೆ ಬಳಿ ಸಂಭವಿಸಿದೆ. ಮುದಾಸಮ್(18), ಇಫ್ತೀಕಾರ್(18), ತೌಸಿಫ್(19) ಮೃತ ದುರ್ದೈವಿಗಳು. ಮೃತರು ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎನ್ನಲಾಗಿದೆ. ಇವರು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶ್ರೀರಂಗಪಟ್ಟಣ ಪೊಲೀಸರು ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಮೃತದೇಹ ದೊರೆತಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮಂಡ್ಯ: ಸ್ನಾನಕ್ಕೆಂದು ಕಾವೇರಿ ನದಿಗಿಳಿದಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಶಂಭುಲಿಂಗಯ್ಯನ ಕಟ್ಟೆ ಬಳಿ ಸಂಭವಿಸಿದೆ. ಮುದಾಸಮ್(18), ಇಫ್ತೀಕಾರ್(18), ತೌಸಿಫ್(19) ಮೃತ ದುರ್ದೈವಿಗಳು.
ಮೃತರು ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎನ್ನಲಾಗಿದೆ. ಇವರು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶ್ರೀರಂಗಪಟ್ಟಣ ಪೊಲೀಸರು ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಮೃತದೇಹ ದೊರೆತಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.