AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​

ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Dec 05, 2020 | 10:44 AM

Share

ಬೆಂಗಳೂರು: ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್‌ಗೆ ಯಾರೂ ಅನುಮತಿಯನ್ನು ಕೇಳಿಲ್ಲ. ನಾವು ಕರ್ನಾಟಕ ಬಂದ್‌ಗೆ ಅನುಮತಿಯನ್ನೂ ಕೊಟ್ಟಿಲ್ಲ ಎಂದಿದ್ದಾರೆ. ನಾಳೆ ಬೆಂಗಳೂರಲ್ಲಿ ಯಾವುದೇ ಱಲಿಗೆ ಅವಕಾಶ ಕೊಟ್ಟಿಲ್ಲ. ನಾಳೆ ಎಂದಿನಂತೆ ಜನಜೀವನ ಇರಲಿದೆ. ಹೀಗಾಗಿ ಬಂದ್ ಬಗ್ಗೆ ಭಯ ಬೇಡ. ಯಾರಾದರೂ ಚೇಷ್ಟೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ. ರೌಡಿಶೀಟರ್‌ಗಳ ಪಟ್ಟಿ ಮಾಡಿದ್ದೇವೆ, ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಭದ್ರತೆಗಾಗಿ ಸಿದ್ಧರಿದ್ದಾರೆ 15 ಸಾವಿರ ಪೊಲೀಸರು: ಇನ್ನು ನಾಳೆ ಅನಾವಶ್ಯಕವಾಗಿ ಬಂದ್ ಮಾಡಲು ಕೆಲವರು ನಾನಾ ಪ್ಲಾನ್​ಗಳನ್ನ ಮಾಡ್ತಾರೆ. ಈ ವೇಳೆ ಬೆಂಕಿ ಹಚ್ಚುವುದಂತಹ ದುರ್ಘಟನೆಗಳು ಸಂಭವಿಸಬಹುದು ಹೀಗಾಗಿ ಪೊಲೀಸರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹೊಯ್ಸಳ, ಡಿಸಿಪಿಗಳು ಸಿಟಿ ರೌಂಡ್ಸ್‌ನಲ್ಲಿ ಇರುತ್ತಾರೆ. 33 KSRP, 32 ಸಿಎಆರ್ ತುಕಡಿಗಳನ್ನು ನಿಯೋಜಿಸಿದ್ದಾರೆ.

Published On - 2:00 pm, Fri, 4 December 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ