ಶನಿವಾರವೂ ದ.ಕನ್ನಡ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ, ಮದ್ಯ ಸಹ ಬ್ಯಾನ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳು, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳು, ವೃತ್ತಿಪರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶಿಸಿದ್ದಾರೆ. ಪರೀಕ್ಷೆಗಳು ಮುಂದೂಡಿಕೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪರೀಕ್ಷೆಗಳನ್ನೂ ಮುಂದೂಡಿದ್ದಾರೆ. ನಾಳೆ ನಡೆಯಬೇಕಿದ್ದ ಬಿಇ ಎಲ್ಲಾ ಪರೀಕ್ಷೆಗಳು ಮುಂದೂಡಿ ವಿಟಿಯು ಪರೀಕ್ಷಾಂಗ ಕುಲಸಚಿವರು […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳು, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳು, ವೃತ್ತಿಪರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶಿಸಿದ್ದಾರೆ.
ಪರೀಕ್ಷೆಗಳು ಮುಂದೂಡಿಕೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪರೀಕ್ಷೆಗಳನ್ನೂ ಮುಂದೂಡಿದ್ದಾರೆ. ನಾಳೆ ನಡೆಯಬೇಕಿದ್ದ ಬಿಇ ಎಲ್ಲಾ ಪರೀಕ್ಷೆಗಳು ಮುಂದೂಡಿ ವಿಟಿಯು ಪರೀಕ್ಷಾಂಗ ಕುಲಸಚಿವರು ಆದೇಶಿಸಿದ್ದಾರೆ.
ಮದ್ಯ ಮಾರಾಟ ನಿಷೇಧ: ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್ ವೇಳೆ ಇಬ್ಬರ ಮೃತಪಟ್ಟ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮದ್ಯದಂಗಡಿ, ವೈನ್ ಶಾಪ್, ಬಾರ್ & ರೆಸ್ಟೋರೆಂಟ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.
Published On - 7:17 pm, Fri, 20 December 19