
ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ತಡರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮದಿಂದಾಗಿ ಉಗರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದ ಸಿಬ್ಬಂದಿಗಳು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಉಗರಗೋಳದಲ್ಲಿರುವ ಕೆರೆ ಭರ್ತಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಜೊತೆಗೆ ಗೋಕಾಕ್ ತಾಲೂಕಿನ ಕಪ್ರಟ್ಟಿ ಗ್ರಾಮದ ಜಮೀನುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಗೋವಿನ ಜೋಳ ಬೆಳೆ ಹಾನಿಗೊಳಗಾಗಿದೆ.