ಕೊರೊನಾ ನಡುವೆಯೇ ಮುತ್ತತ್ತಿಯಲ್ಲಿ ಪ್ರವಾಸಿಗರ ವೀಕೆಂಡ್ ಮಸ್ತಿ, ಭರ್ಜರಿ ಬಾಡೂಟ..
ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ. ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು […]
ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ.
ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಲೇ ಬೇಕಾಗುತ್ತೆ. ಆದರೆ ಇಲ್ಲಿಗೆ ಬಂದಿರುವ ಜನ ಎಲ್ಲವನ್ನೂ ಮರೆತು ಎಂಜಾಯ್ ಮಾಡ್ತಿದ್ದಾರೆ. ನದಿಯಲ್ಲಿ ಈಜಾಡಿ, ಬಾಡೂಟ ಸವಿದು ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಭರ್ಜರಿ ಬಾಡೂಡ ಮಾಡಿ ಸವಿಯುತ್ತಿದ್ದಾರೆ. ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಆದರೆ ವಿಪರ್ಯಾಸ ಅಂದ್ರೆ ಎಲ್ಲವನ್ನು ಕಂಡು ಕಾಣದಂತೆ ಅಧಿಕಾರಿಗಳು ಸುಮ್ಮನಿದ್ದಾರೆ.