Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ. ಈ ಎಲ್ಲಾ ರಸ್ತೆಗಳಲ್ಲಿ […]

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.
ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ.
ಈ ಎಲ್ಲಾ ರಸ್ತೆಗಳಲ್ಲಿ ಏಕಮುಖ ಮಾರ್ಗ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗುವುದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಇದರಿಂದ ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ.
Published On - 5:22 pm, Tue, 21 July 20




