ಸ್ವಲ್ಪವೇ ಯಾಮಾರಿದ್ದರೂ 2 ದಿನ ಕತ್ಲಲ್ಲಿ ಮುಳುಗ್ತಿತ್ತು ಸಿಲಿಕಾನ್ ಸಿಟಿ
ಬೆಂಗಳೂರು: ನಗರದ ಬೆಸ್ಕಾಂ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಆನಂದ್ ರಾವ್ ಸರ್ಕಲ್ನ ಬೆಸ್ಕಾಂ ಕಚೇರಿಯಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಆಯಿಲ್ ಲೀಕ್ ಆಗಿ ಬೆಂಕಿ ಹೊತ್ತಿ ಕೊಂಡಿದೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟವಾದ ಹೊಗೆ ಕಾಣಿಸಿಕೊಂಡು ಕೆಲ ಕಾಲ ಸ್ಥಳೀಯರಲ್ಲಿ ಭೀತಿ ಎದುರಾಗಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ. ಇನ್ನು ಘಟನೆಯಿಂದ ಗಾಂಧಿನಗರ ಭಾಗದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ […]
ಬೆಂಗಳೂರು: ನಗರದ ಬೆಸ್ಕಾಂ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಆನಂದ್ ರಾವ್ ಸರ್ಕಲ್ನ ಬೆಸ್ಕಾಂ ಕಚೇರಿಯಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಆಯಿಲ್ ಲೀಕ್ ಆಗಿ ಬೆಂಕಿ ಹೊತ್ತಿ ಕೊಂಡಿದೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟವಾದ ಹೊಗೆ ಕಾಣಿಸಿಕೊಂಡು ಕೆಲ ಕಾಲ ಸ್ಥಳೀಯರಲ್ಲಿ ಭೀತಿ ಎದುರಾಗಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ. ಇನ್ನು ಘಟನೆಯಿಂದ ಗಾಂಧಿನಗರ ಭಾಗದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಸ್ಥಳಕ್ಕೆ ಆಗಮಿಸಿರುವ ಬೆಸ್ಕಾಂ ಸಿಬ್ಬಂದಿಗಳು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ವಿಚಾರಣೆ ಆರಂಭಿಸಿದ್ದಾರೆ.
Published On - 3:08 pm, Mon, 17 February 20