ಸ್ವಲ್ಪವೇ ಯಾಮಾರಿದ್ದರೂ 2 ದಿನ ಕತ್ಲಲ್ಲಿ ಮುಳುಗ್ತಿತ್ತು ಸಿಲಿಕಾನ್ ಸಿಟಿ

ಬೆಂಗಳೂರು: ನಗರದ ಬೆಸ್ಕಾಂ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಆನಂದ್ ರಾವ್ ಸರ್ಕಲ್​ನ ಬೆಸ್ಕಾಂ ಕಚೇರಿಯಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಆಯಿಲ್ ಲೀಕ್ ಆಗಿ ಬೆಂಕಿ ಹೊತ್ತಿ ಕೊಂಡಿದೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟವಾದ ಹೊಗೆ ಕಾಣಿಸಿಕೊಂಡು ಕೆಲ‌ ಕಾಲ ಸ್ಥಳೀಯರಲ್ಲಿ ಭೀತಿ‌ ಎದುರಾಗಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ. ಇನ್ನು ಘಟನೆಯಿಂದ ಗಾಂಧಿನಗರ ಭಾಗದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ […]

ಸ್ವಲ್ಪವೇ ಯಾಮಾರಿದ್ದರೂ 2  ದಿನ ಕತ್ಲಲ್ಲಿ ಮುಳುಗ್ತಿತ್ತು ಸಿಲಿಕಾನ್ ಸಿಟಿ
ಸಾಧು ಶ್ರೀನಾಥ್​

Updated on: Feb 17, 2020 | 3:18 PM

ಬೆಂಗಳೂರು: ನಗರದ ಬೆಸ್ಕಾಂ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಆನಂದ್ ರಾವ್ ಸರ್ಕಲ್​ನ ಬೆಸ್ಕಾಂ ಕಚೇರಿಯಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಆಯಿಲ್ ಲೀಕ್ ಆಗಿ ಬೆಂಕಿ ಹೊತ್ತಿ ಕೊಂಡಿದೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟವಾದ ಹೊಗೆ ಕಾಣಿಸಿಕೊಂಡು ಕೆಲ‌ ಕಾಲ ಸ್ಥಳೀಯರಲ್ಲಿ ಭೀತಿ‌ ಎದುರಾಗಿತ್ತು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ. ಇನ್ನು ಘಟನೆಯಿಂದ ಗಾಂಧಿನಗರ ಭಾಗದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ‌ಇದೆ ಎನ್ನಲಾಗುತ್ತಿದೆ. ಇನ್ನು ಸ್ಥಳಕ್ಕೆ ಆಗಮಿಸಿರುವ ಬೆಸ್ಕಾಂ ಸಿಬ್ಬಂದಿಗಳು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ವಿಚಾರಣೆ ಆರಂಭಿಸಿದ್ದಾರೆ.

Published On - 3:08 pm, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us