ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಂಗಳಮುಖಿಯ ಬರ್ಬರ ಕೊಲೆ, ಯಾವೂರಲ್ಲಿ?
ಚಿತ್ರದುರ್ಗ: ಮಂಗಳಮುಖಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆಮಾಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿಯಲ್ಲಿ ನಡೆದಿದೆ. 35 ವರ್ಷದ ಅಂಜಲಿ ಕೊಲೆಯಾದ ಮಂಗಳಮುಖಿ ಎಂದು ತಿಳಿದುಬಂದಿದೆ. ಅಂಜಲಿ ನಿನ್ನೆಯಿಂದ ನಾಪತ್ತೆಯಾಗಿದ್ದು ಇಂದು ಅನುಮಾನಾಸ್ಪದ ರೀತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ DySP ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಚಿತ್ರದುರ್ಗ: ಮಂಗಳಮುಖಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆಮಾಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿಯಲ್ಲಿ ನಡೆದಿದೆ. 35 ವರ್ಷದ ಅಂಜಲಿ ಕೊಲೆಯಾದ ಮಂಗಳಮುಖಿ ಎಂದು ತಿಳಿದುಬಂದಿದೆ.
ಅಂಜಲಿ ನಿನ್ನೆಯಿಂದ ನಾಪತ್ತೆಯಾಗಿದ್ದು ಇಂದು ಅನುಮಾನಾಸ್ಪದ ರೀತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ DySP ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
