ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರಿಗೆ ಸಂಕಷ್ಟ, ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆ

| Updated By:

Updated on: Jun 09, 2020 | 8:23 AM

ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಆದ್ರೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ. ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ(38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ(60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್(47) ಆತ್ಮಹತ್ಯೆಗೆ ಶರಣಾದ ನೇಕಾರರು. ಜವಳಿ ಸಚಿವರಾಗಿ ಶ್ರೀಮಂತ ಪಾಟೀಲ್ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಒಂದೇ […]

ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರಿಗೆ ಸಂಕಷ್ಟ, ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆ
Follow us on

ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ಒಂದೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಆದ್ರೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ.

ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ(38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ(60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್(47) ಆತ್ಮಹತ್ಯೆಗೆ ಶರಣಾದ ನೇಕಾರರು.

ಜವಳಿ ಸಚಿವರಾಗಿ ಶ್ರೀಮಂತ ಪಾಟೀಲ್ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಒಂದೇ ಒಂದು ಸಭೆ ಕೂಡ ಮಾಡಿಲ್ಲ. ಮೂವರ ಸಾವಿನಿಂದಾಗಿ ಮಾನಸಿಕವಾಗಿ ಬೆಳಗಾವಿ ಜಿಲ್ಲೆ ನೇಕಾರರು ಕುಗ್ಗಿಹೋಗಿದ್ದಾರೆ. ಜಿಲ್ಲೆಗೆ ಬಾರದ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.