BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌

|

Updated on: Jul 03, 2020 | 1:22 PM

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ […]

BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌
Follow us on

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಕುರಿತು ಚರ್ಚಿಸಿದರು. ಸುಮಾರು 15 ವರ್ಷಗಳ ಕಾಲ‌ ಇದ್ದ ಎಲ್ಲಾ ಕಾನೂನು ತೊಡಕುಗಳು ಈಗ ನಿವಾರಣೆಯಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಟಿಟಿಡಿ‌ ಅಧ್ಯಕ್ಷ ಸುಬ್ಬಾರೆಡ್ಡಿ ಈ ಸಂದರ್ಭದಲ್ಲಿ ಒಪ್ಪಿಗೆ ನೀಡಿದರು.