ಮಂಗಳೂರು: ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರ ಬರ್ಬರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಸುರೇಂದ್ರ ಬಂಟ್ವಾಳ್ ಫ್ಲಾಟ್ನಲ್ಲೇ ಕಿರಾತಕರು ಕೊಲೆ ಮಾಡಿ ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ.
ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಬೆದರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಹಿಂದೆ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಈಗ ಕೆಲ ದುಷ್ಕರ್ಮಿಗಳು ಅವರನ್ನ ಕೊಲೆ ಮಾಡಿದ್ದಾರೆ.