ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..

|

Updated on: Dec 01, 2020 | 9:56 AM

ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಾ ಆರತಿ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..
ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ
Follow us on

ಬಳ್ಳಾರಿ: ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರುಗಿತು. ಪ್ರತಿ ತಿಂಗಳು ತುಂಗಭದ್ರಾ ನದಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ಇವತ್ತು ಕೂಡ ತುಂಗಾ ಆರತಿ ಕಾರ್ಯಕ್ರಮ ಜರುಗಿತು.

ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿ, ಆರತಿ ಬೆಳಗಿದರು.

ಈ ವೇಳೆ ಹಂಪಿಗೆ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ತುಂಗಭದ್ರಾ ನದಿಯಲ್ಲಿ ಪುಷ್ಕರ ಸ್ನಾನ ಮಾಡಿ ತುಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನದಿ ದಂಡೆಯ ಮಂಟಪ ಹಾಗೂ ಸ್ನಾನಘಟ್ಟವನ್ನ ವಿದ್ಯುತ್ ದ್ವೀಪಗಳಿಂದ ಅಲಂಕಾರಗೊಳಿಸಲಾಗಿತ್ತು.

ಇದನ್ನೂ ಓದಿ: ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು

Published On - 9:52 am, Tue, 1 December 20