ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ

ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ.

ಹಾಸನದಲ್ಲಿ ಡೇರಿ ಸ್ಥಳಾಂತರ ವಿಚಾರಕ್ಕೆ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ.. ಕಾರ್ಯದರ್ಶಿ ಸೇರಿ ಹಲವರಿಗೆ ಗಾಯ
JDS, BJP ಕಾರ್ಯಕರ್ತರ ನಡುವೆ ಮಾರಾಮಾರಿ
Follow us
ಆಯೇಷಾ ಬಾನು
|

Updated on:Mar 11, 2021 | 12:21 PM

ಹಾಸನ: ಡೇರಿ ಸ್ಥಳಾಂತರ ಮಾಡುವ ವಿಚಾರಕ್ಕೆ JDS, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ಹಾಸನ ತಾಲೂಕಿನ ಶಂಖ ಗ್ರಾಮದಲ್ಲಿ ನಡೆದಿದೆ. ಗಲಾಟೆಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

5 ವರ್ಷದಿಂದ ಖಾಸಗಿ ಕಟ್ಟಡದಲ್ಲಿ ಮಹಿಳಾ ಹಾಲಿನ ಡೇರಿ ನಡೆಸಲಾಗುತ್ತಿತ್ತು. ಈ ಕಟ್ಟಡ ಜೆಡಿಎಸ್ ಬೆಂಬಲಿತ ಉಮೇರಾ ಭಾನುಗೆ ಸೇರಿದ ಕಟ್ಟಡವಾಗಿದೆ. ಮಹಿಳಾ ಹಾಲಿನ ಡೇರಿಯನ್ನು ಖಾಸಗಿ ಕಟ್ಟಡದಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಸ್ಥಳಾಂತರಿಸಲು ಬಿಜೆಪಿ ಕಾರ್ಯಕರ್ತರ ಒತ್ತಾಯಿಸಿದ್ದರು. ಜಿಲ್ಲಾ ಸಹಕಾರ ಸಂಘಗಳ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನೀಲ್ ಮೂಲಕ ಕಟ್ಟಡ ವರ್ಗಾವಣೆ ಮಾಡಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದ್ದು ಕೊನೆಗೆ ದೊಣ್ಣೆ, ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಕೊನೆಗೂ ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಚೇರಿಗೆ ಡೇರಿಯನ್ನು ಸ್ಥಳಾಂತರ ಮಾಡಿದ್ದಾರೆ.

ಈ ಮಾರಾಮಾರಿಯಲ್ಲಿ ಡೇರಿ ಕಾರ್ಯದರ್ಶಿ ಉಮೇರಾ ಭಾನು, ಸಹಕಾರ ಸಂಘ ಸಹಾಯಕ ಅಭಿವೃದ್ಧಿ ಅಧಿಕಾರಿ ಸುನಿಲ್, ಬಿಜೆಪಿ ಬೆಂಬಲಿತ ಜಬಿಉಲ್ಲಾ ಷರೀಫ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರ ಮೇಲೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ರೇವಣ್ಣ, ಪ್ರೀತಂಗೌಡ ಮಧ್ಯೆ ಕೋಲ್ಡ್ ವಾರ್ ಇನ್ನು ಶಂಖ ಗ್ರಾಮದಲ್ಲಿನ ಡೇರಿ ಸ್ಥಳಾಂತರಕ್ಕೆ ಬಿಜೆಪಿ ಶಾಸಕ ಪ್ರೀತಂಗೌಡ ಸೂಚಿಸಿದ್ದರು. ಶಾಸಕರ ಸೂಚನೆ ಮೇರೆಗೆ ಡೇರಿ ಸ್ಥಳಾಂತರಿಸಲಾಗಿತ್ತು ಎಂದು ತಿಳಿದು ಬಂದಿದೆ. ಕಾನೂನು ಬಾಹಿರವಾಗಿ ಡೇರಿ ಸ್ಥಳಾಂತರಿಸಲಾಗಿದೆ ಎಂದು ಶಂಖ ಗ್ರಾಮದ ಕೆಲವರು ಆರೋಪಿಸಿದ್ದಾರೆ. ಜೊತೆಗೆ ಡೇರಿ ಸ್ಥಳಾಂತರ ಬೆನ್ನಲ್ಲೇ ಹಾಲು ಪಡೆಯದಂತೆ ಹಾಸನ ಹಾಲು ಒಕ್ಕೂಟದಿಂದ ಆದೇಶ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಹೆಚ್​.ಡಿ.ರೇವಣ್ಣ ಒತ್ತಡದಿಂದ ಹಾಲು ಖರೀದಿಸುತ್ತಿಲ್ಲ ಎಂದು ಶಂಖ ಗ್ರಾಮದ ಕೆಲವರು ರೇವಣ್ಣ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಜೈಶ್ರೀರಾಮ್ ಘೋಷಣೆ ಕೂಗಿದಕ್ಕೆ ಉಂಟಾಯ್ತು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ, ಪೊಲೀಸರಿಂದ ಲಾಠಿ ಚಾರ್ಜ್

Published On - 11:44 am, Thu, 11 March 21

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್