AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ವಿ. ಮೋಹನ್​ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರಧಾನ

ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರಧಾನ ಮಾಡಿದರು.

ಟಿ.ವಿ. ಮೋಹನ್​ದಾಸ್‌ ಪೈ ಅವರಿಗೆ ರಾಣಿ ಚೆನ್ನಮ್ಮ ವಿವಿ ಗೌರವ ಡಾಕ್ಟರೇಟ್‌ ಪದವಿ ಪ್ರಧಾನ
ಮೋಹನ್​ದಾಸ್ ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ
TV9 Web
| Edited By: |

Updated on:Apr 06, 2022 | 9:09 PM

Share

ಬೆಂಗಳೂರು: ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನ್‌ದಾಸ್‌ ಪೈ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರಧಾನ ಮಾಡಿದರು. ವಿಶ್ವವಿದ್ಯಾಲಯದ ಕುಲಪತಿಯೂ ಆಗಿರುವ ರಾಜ್ಯಪಾಲ ವಜುಭಾಯಿ ವಾಲ ಅವರು ಪ್ರಧಾನ ಮಾಡಿದರು.

ರಾಜಭವನದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ವಜುಭಾಯಿ ವಾಲ, ಪೈ ಅವರಿಗೆ ಈ ಪದವಿಯನ್ನು ಪ್ರಧಾನ ಮಾಡಿ ಮಾತನಾಡಿದರು. ಎಲ್ಲರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಪೈ ಅವರ ಸೇವೆ ಅನುಕರಣೀಯವಾಗಿದೆ ಎಂದರು.

ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಮೋಹನ್‌ದಾಸ್‌ ಪೈ ಅವರು, ಇನ್ಫೋಸಿಸ್‌ನಂಥ ಪ್ರತಿಷ್ಠಿತ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿಯಾಗಿ ಆ ಕಂಪನಿಗೆ ಆರ್ಥಿಕ ಸದೃಢತೆಯನ್ನು ತಂದುಕೊಟ್ಟವರು. ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಸಲ್ಲುತ್ತಿರುವುದು ಸಂತೋಷ ಉಂಟು ಮಾಡಿದೆ ಎಂದರು.

ಮೋಹನ್‌ದಾಸ್‌ ಪೈ, ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದರು. ಶೈಕ್ಷಣಿಕವಾಗಿ ರಾಜ್ಯವು ಉನ್ನತ ಮಟ್ಟದಲ್ಲೇ ಇದ್ದರೂ ಸಂಶೋಧನೆಗೆ ಇನ್ನಷ್ಟು ಒತ್ತು ನೀಡಬೇಕು.‌ ಕೊನೆಯಪಕ್ಷ 100 ಕೋಟಿ ರೂಪಾಯಿಗಳಷ್ಟು ಮೊತ್ತವನ್ನಾದರೂ ಸಂಶೋಧನಾ ಕ್ಷೇತ್ರಕ್ಕೆ ಮೀಸಲಿಡಬೇಕು. ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಆರ್ಥಿಕ ಸಹಕಾರವನ್ನು ಒದಗಿಸಬೇಕು. ಆಗ ಮಾತ್ರ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ಬರುತ್ತದೆ ಹಾಗೂ ದೇಶದ ಅಭಿವೃದ್ಧಿಗೆ ವೇಗ ಬರುತ್ತದೆ ಎಂದರು.

ಶಾಲೆ-ಕಾಲೇಜುಗಳಲ್ಲಿ ಕಲಿಯುವ ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ಉದಾರವಾಗಿ ಒದಗಿಸಬೇಕು. ಮೂಲಸೌಕರ್ಯಗಳನ್ನು ಪರಿಣಾಮಕಾರಿ ಒದಗಿಸಬೇಕು ಎಂದು ಪೈ ಮನವಿ ಮಾಡಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರ ಗೌಡ, ಕುಲಸಚಿವ ಪ್ರೊ.ಬಸವರಾಜ್‌ ಪದ್ಮಶಾಲಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Published On - 10:33 pm, Mon, 11 January 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?