ಟಿವಿ9 ಇಂಪ್ಯಾಕ್ಟ್: ಒಂದೇ ಗುಂಡಿಯಲ್ಲಿ ಎರಡು ಸೋಂಕಿತರ ಶವ, ತನಿಖೆಗೆ ಡಿಸಿ ಆದೇಶ
ಬಳ್ಳಾರಿ: ಆರೋಗ್ಯ ಸಚಿವ ಬಿ. ಶ್ರೀರಾಮುಲು ತವರು ಜಿಲ್ಲೆಯಲ್ಲಿ ಕ್ರೂರಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ನಿನ್ನೆ ಒಂದೇ ದಿನ ಕಿಲ್ಲರ್ ಕೊರೊನಾಗೆ 9 ಮಂದಿ ಬಲಿಯಾಗಿದ್ರು. ಆಘಾತಕಾರಿ ವಿಷಯವೆಂದ್ರೆ ಇಂದೂ ಸಹ ಕ್ರೂರಿ ಕೊರೊನಾಗೆ ಐವರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ. ಟಿವಿ9 ಇಂಪ್ಯಾಕ್ಟ್: ಈ ಮಧ್ಯೆ, ಬಳ್ಳಾರಿಯಲ್ಲಿ ಅಮಾನವೀಯ ರೀತಿಯಲ್ಲಿ ಕೊರೊನಾ ಸೋಂಕಿತರ ಶವ ಸಂಸ್ಕಾರ ನಡೆಸಿರುವ ಹಿನ್ನೆಲೆಯಲ್ಲಿ ಟಿವಿ9 ನಲ್ಲಿ ವರದಿ […]
ಬಳ್ಳಾರಿ: ಆರೋಗ್ಯ ಸಚಿವ ಬಿ. ಶ್ರೀರಾಮುಲು ತವರು ಜಿಲ್ಲೆಯಲ್ಲಿ ಕ್ರೂರಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ನಿನ್ನೆ ಒಂದೇ ದಿನ ಕಿಲ್ಲರ್ ಕೊರೊನಾಗೆ 9 ಮಂದಿ ಬಲಿಯಾಗಿದ್ರು. ಆಘಾತಕಾರಿ ವಿಷಯವೆಂದ್ರೆ ಇಂದೂ ಸಹ ಕ್ರೂರಿ ಕೊರೊನಾಗೆ ಐವರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.
ಟಿವಿ9 ಇಂಪ್ಯಾಕ್ಟ್: ಈ ಮಧ್ಯೆ, ಬಳ್ಳಾರಿಯಲ್ಲಿ ಅಮಾನವೀಯ ರೀತಿಯಲ್ಲಿ ಕೊರೊನಾ ಸೋಂಕಿತರ ಶವ ಸಂಸ್ಕಾರ ನಡೆಸಿರುವ ಹಿನ್ನೆಲೆಯಲ್ಲಿ ಟಿವಿ9 ನಲ್ಲಿ ವರದಿ ಪ್ರಸಾರವಾದ ಬಳಿಕ ಡಿಸಿ S.S. ನಕುಲ್ ತನಿಖೆಗೆ ಆದೇಶಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಘನಘೋರ!
ಕೊರೊನಾದಿಂದ ಸಾವನ್ನಪ್ಪಿದ್ದವರ ಶವಗಳನ್ನ ಗುಂಡಿಗೆ ಎಸೆಯುತ್ತಿದ್ದಾರೆ. ಅಲ್ಲದೆ, ದರದರನೇ ಶವಗಳನ್ನ ಎಳೆದು ಒಂದೊಂದು ಗುಂಡಿಯಲ್ಲಿ ಎರಡು ಶವಗಳನ್ನ ಎಸೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಬಗ್ಗೆ ಟಿವಿ9 ನಲ್ಲಿ ಸುದ್ದಿ ಪ್ರಸಾರವಾಗಿತ್ತು.
Published On - 1:37 pm, Tue, 30 June 20