
ಗದಗ: ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಈ ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ಜನರು ನೀರನ್ನು ಹೊರ ಹಾಕಲು ಹರಸಾಹಸ ಪಡ್ತಿದ್ದಾರೆ.
ಹದಗೆಟ್ಟ ರಸ್ತೆಯಲ್ಲಿ ಸಿಲುಕಿ ಪ್ರಯಾಣಿಕರ ಪರದಾಟ:
ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ರಸ್ತೆಯಲ್ಲಿ ಸರ್ಕಾರಿ ಬಸ್ ಸಿಲುಕಿಕೊಂಡು ಪ್ರಯಾಣಿಕರು ಪರದಾಡಿದ್ದಾರೆ. ಮೆಣಸಗಿ ಗ್ರಾಮದಿಂದ ಗದಗ ನಗರಕ್ಕೆ ಹೊರಟಿದ್ದ ಬಸ್, ಹದಗೆಟ್ಟ ರಸ್ತೆಯಲ್ಲಿ ಸಿಲುಕಿಕೊಂಡಿದೆ. ರಸ್ತೆ ದುರಸ್ತಿ ಮಾಡಿಸದ ಹಿನ್ನೆಲೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಮೂಲಕ ಸಿಲುಕಿದ ಬಸ್ ಹೊರ ತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.