ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್

|

Updated on: Jan 16, 2021 | 7:49 AM

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಅರೆಸ್ಟ್
ಶ್ರೀನಿವಾಸ್‌ (ಎಡ) ಶಿವಕುಮಾರ್ (ಬಲ)
Follow us on

ತುಮಕೂರು: ಖೋಟಾ ನೋಟು ಪ್ರಿಂಟ್ ಮಾಡಿ ಚಲಾವಣೆಗೆ ಯತ್ನ ಹಿನ್ನೆಲೆಯಲ್ಲಿ ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್, ಶ್ರೀನಿವಾಸ್‌ ಬಂಧಿತ ಆರೋಪಿಗಳು.

ಆರೋಪಿಗಳು ಮನೆಯಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ್ದರು. ವಿಷಯ ತಿಳಿದು ದಾಳಿ ನಡೆಸಿದ ವೈ.ಎನ್‌.ಹೊಸಕೋಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 248 ಖೋಟಾ ನೋಟು, 200 ರೂಪಾಯಿ ಮುಖಬೆಲೆಯ 10 ಖೋಟಾ ನೋಟು, 100 ರೂ. ಮುಖಬೆಲೆಯ 17 ಖೋಟಾ ನೋಟನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವೈ.ಎನ್‌.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತೆಯಲ್ಲಿ ಕಂತೆ ಕಂತೆ ಖೋಟಾ ನೋಟ್ ಜೊತೆ ಪತ್ತೆಯಾದ ಐನಾತಿಗಳು ಅರೆಸ್ಟ್