ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, ಮತ್ತಿಬ್ಬರು ಪರಾರಿ

ಮೈಸೂರು: ಕಾಡು ಪ್ರಾಣಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಬುಕೊಲ್ಲಿ ಆನೆ ಕಂದಕದ ಬಳಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್ವರು ದುಷ್ಕರ್ಮಿಗಳು ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಅವರನ್ನ ಬಂಧಿಸಿದ್ದಾರೆ. ಆದರೆ ಮನು, ಮಂಜು ಬಂಧಿಯಾಗಿದ್ದು ಪೂವಯ್ಯ, ರಾಜು ಪರಾರಿಯಾಗಿದ್ದಾರೆ. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಜೋಡಿ ನಳಿಕೆ ಬಂದೂಕು ಜಪ್ತಿ ಮಾಡಲಾಗಿದೆ. ಆನೆ ಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಕೇಸ್ […]

ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, ಮತ್ತಿಬ್ಬರು ಪರಾರಿ
Follow us
ಆಯೇಷಾ ಬಾನು
|

Updated on: Sep 22, 2020 | 7:54 AM

ಮೈಸೂರು: ಕಾಡು ಪ್ರಾಣಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಬುಕೊಲ್ಲಿ ಆನೆ ಕಂದಕದ ಬಳಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಾಲ್ವರು ದುಷ್ಕರ್ಮಿಗಳು ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಅವರನ್ನ ಬಂಧಿಸಿದ್ದಾರೆ. ಆದರೆ ಮನು, ಮಂಜು ಬಂಧಿಯಾಗಿದ್ದು ಪೂವಯ್ಯ, ರಾಜು ಪರಾರಿಯಾಗಿದ್ದಾರೆ. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಜೋಡಿ ನಳಿಕೆ ಬಂದೂಕು ಜಪ್ತಿ ಮಾಡಲಾಗಿದೆ. ಆನೆ ಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಲಾಗಿದೆ.