AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಗ್ರಾಮೀಣ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರ ಬಂಧನ

ಕೊಪ್ಪಳ: ಜಿಲ್ಲೆಯಲ್ಲಾದ ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಬ್ಯಾಂಕ್ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಮತ್ತು ಹರಿದಾಸ್ ಬಂಧಿತರು. ಆರೋಪಿಗಳಿಂದ 370 ಗ್ರಾಂ ಬಂಗಾರ 65 ಸಾವಿರ ನಗದು, ಎರಡು ಕಾರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಸಪ್ಟೆಂಬರ್ 24 ರಂದು ಕೊಪ್ಪಳ‌ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಕಳ್ಳತನ ನಡೆದಿತ್ತು. ಈ ವೇಳೆ 21,75,572 ನಗದು, 1, 24,80,353 ಮೊತ್ತದ ಬಂಗಾರ ಸೇರಿ 1,46,55,905 ಮೊತ್ತದಷ್ಟು ಕಳ್ಳತನವಾಗಿತ್ತು. 10 […]

ಕೊಪ್ಪಳ ಗ್ರಾಮೀಣ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರ ಬಂಧನ
ಆಯೇಷಾ ಬಾನು
|

Updated on: Oct 08, 2020 | 2:12 PM

Share

ಕೊಪ್ಪಳ: ಜಿಲ್ಲೆಯಲ್ಲಾದ ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಬ್ಯಾಂಕ್ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಮತ್ತು ಹರಿದಾಸ್ ಬಂಧಿತರು. ಆರೋಪಿಗಳಿಂದ 370 ಗ್ರಾಂ ಬಂಗಾರ 65 ಸಾವಿರ ನಗದು, ಎರಡು ಕಾರ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಸಪ್ಟೆಂಬರ್ 24 ರಂದು ಕೊಪ್ಪಳ‌ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಕಳ್ಳತನ ನಡೆದಿತ್ತು. ಈ ವೇಳೆ 21,75,572 ನಗದು, 1, 24,80,353 ಮೊತ್ತದ ಬಂಗಾರ ಸೇರಿ 1,46,55,905 ಮೊತ್ತದಷ್ಟು ಕಳ್ಳತನವಾಗಿತ್ತು. 10 ಜನ ಆರೋಪಿಗಳು ಸೇರಿ ಕಂಟ್ರಿ ಪಿಸ್ತೂಲ್ ಸಮೇತ ಬಂದು‌ ಬ್ಯಾಂಕ್ ದರೋಡೆ ಮಾಡಿದ್ದರು.

10 ಜನರ ಪೈಕಿ ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳು ಮಹಾರಾಷ್ಟ್ರ ಗಡಿಯ ಜಳಕಿ ಚೆಕ್ ಪೋಸ್ಟ್‌ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 370 ಗ್ರಾಂ ಬಂಗಾರ 65 ಸಾವಿರ ನಗದು, ಎರಡು ಕಾರ್​ಗಳನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ 8 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಕೊಪ್ಪಳ ಎಸ್ಪಿ ಜೆ ಸಂಗೀತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಗ್ರಾಮೀಣ ಬ್ಯಾಂಕ್‌ನಲ್ಲಿ ಬೃಹತ್ ದರೋಡೆ: 1 ಕೋಟಿ ರೂ. ಮೌಲ್ಯದ ನಗದು, ಆಭರಣ ಲೂಟಿ

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?