ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್, 5 KG ಗಾಂಜಾ ವಶ
ಧಾರವಾಡ: ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಗದಗ ಮೂಲದ ಮಾರುತಿ ಹರಣಕಾಶಿ, ಚಂದಪ್ಪ ಬಂಧಿತರು. ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಬ್ಬಳ್ಳಿಯ ದೇಶಪಾಂಡೆ ನಗರದ ಚರ್ಚ್ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ 90 ಸಾವಿರ ರೂಪಾಯಿ ಮೌಲ್ಯದ ವಸ್ತು ಸೇರಿ 5 ಕೆಜಿ ಗಾಂಜಾ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ: ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಗದಗ ಮೂಲದ ಮಾರುತಿ ಹರಣಕಾಶಿ, ಚಂದಪ್ಪ ಬಂಧಿತರು.
ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹುಬ್ಬಳ್ಳಿಯ ದೇಶಪಾಂಡೆ ನಗರದ ಚರ್ಚ್ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ 90 ಸಾವಿರ ರೂಪಾಯಿ ಮೌಲ್ಯದ ವಸ್ತು ಸೇರಿ 5 ಕೆಜಿ ಗಾಂಜಾ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.