ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ. ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯ ಅಳ ತಿಳಿಯದೆ ಒಬ್ಬರಿಗೊಬ್ಬರು ತಬ್ಬಿಕೊಂಡು ಜಲಸಮಾಧಿಯಾದ ಬಾಲಕರು!
ಸಾಧು ಶ್ರೀನಾಥ್​

Updated on: May 18, 2020 | 8:40 PM

ನೆಲಮಂಗಲ: ಬಾಲಕರಿಬ್ಬರು ಬೇಸಿಗೆ ರಜೆಯಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದಾಗ ಜಲ ಸಮಾಧಿಯಾಗಿದ್ದಾರೆ. ಕೆರೆಯ ಅಳ ತಿಳಿಯದೆ ಮುಳುಗುವಾಗ ಒಬ್ಬರಿಗೊಬ್ಬರು ತಬ್ಬಿಕೊಂಡು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹತ್ತುಕುಂಟೆಪಾಳ್ಯ ಬಳಿಯ ಕೆರೆಯಲ್ಲಿ ಮುಳುಗಿ ಪುರುಷೋತ್ತಮ್(14) ಮತ್ತು ನಾಗೇಶ್(17) ಸಾವಿಗೀಡಾಗಿದ್ದಾರೆ.

ಮೃತ ದುರ್ದೈವಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಸೇರಿದವರು. ಗ್ರಾಮಸ್ಥರ ಸಹಾಯದಿಂದ ಕೆರೆಯಲ್ಲಿ ಮುಳುಗಿದ್ದ ಯುವಕರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:32 pm, Mon, 18 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us