
ತುಮಕೂರು: ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಉಜ್ಜನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಖಾಸಗಿ ಬಸ್‌ನಲ್ಲಿದ್ದ ಪವನ್, ರಮೇಶ್ ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಲಾರಿ ಮತ್ತು ಖಾಸಗಿ ಬಸ್ ಪಲ್ಟಿಯಾಗಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಶಿರಾ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಾವರೆಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 9:41 am, Sun, 1 March 20