ಎರಡು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು

|

Updated on: Sep 19, 2020 | 7:08 AM

ಮೈಸೂರು: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ. ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲವಾಲದ ರಾಮಚಂದ್ರ(22) ಮತ್ತು ನವೀನ್(24) ಮೃತ ದುರ್ದೈವಿಗಳಾಗಿದ್ದು, ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು […]

ಎರಡು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು
Follow us on

ಮೈಸೂರು: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ.

ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲವಾಲದ ರಾಮಚಂದ್ರ(22) ಮತ್ತು ನವೀನ್(24) ಮೃತ ದುರ್ದೈವಿಗಳಾಗಿದ್ದು, ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 6:54 am, Sat, 19 September 20