ಲಾರಿಗೆ ಮಿನಿಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

|

Updated on: Feb 24, 2020 | 4:39 PM

ತುಮಕೂರು: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಮಿನಿ ಬಸ್​ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಬಾಲೇನಹಳ್ಳಿ ಗೇಟ್ ಬಳಿ ನಡೆದಿದೆ. ಶಿರಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಿನಿ ಬಸ್​ನಲ್ಲಿದ್ದ ಬೆಂಗಳೂರು ಮೂಲದ ಪೂಜಾ(30), ಮಿನಿ ಬಸ್ ಚಾಲಕ ಕಿಶೋರ್(40) ಮೃತ ದುರ್ದೈವಿಗಳು. ಮಿನಿ ಬಸ್​ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿಗೆ ಮಿನಿಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು
Follow us on

ತುಮಕೂರು: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಮಿನಿ ಬಸ್​ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಬಾಲೇನಹಳ್ಳಿ ಗೇಟ್ ಬಳಿ ನಡೆದಿದೆ.

ಶಿರಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮಿನಿ ಬಸ್​ನಲ್ಲಿದ್ದ ಬೆಂಗಳೂರು ಮೂಲದ ಪೂಜಾ(30), ಮಿನಿ ಬಸ್ ಚಾಲಕ ಕಿಶೋರ್(40) ಮೃತ ದುರ್ದೈವಿಗಳು. ಮಿನಿ ಬಸ್​ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.