ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ, ಸ್ಥಳದಲ್ಲೇ ಇಬ್ಬರ ಸಾವು

ವಿಜಯಪುರ: ಕ್ಯಾಂಟರ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕ್ಯಾಂಟರ್​ ಚಾಲಕ ಮತ್ತು ಕ್ಲೀನರ್​ನ ಮೃತ ದೇಹವನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ, ಸ್ಥಳದಲ್ಲೇ ಇಬ್ಬರ ಸಾವು

Updated on: Jul 05, 2020 | 9:44 AM

ವಿಜಯಪುರ: ಕ್ಯಾಂಟರ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕ್ಯಾಂಟರ್​ ಚಾಲಕ ಮತ್ತು ಕ್ಲೀನರ್​ನ ಮೃತ ದೇಹವನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.