ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ, ಮುಂದುವರೆದ ಶೋಧ ಕಾರ್ಯ

ವಿಜಯಪುರ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ತೆರಳಿದ್ದರು. ಈ ವೇಳೆ ಗಾಳಿ ಸಹಿತ ಭಾರಿ ಮಳೆಗೆ ತೆಪ್ಪ ಮಗುಚಿ ಬಿದ್ದಿತ್ತು. ಮೂವರ ಪೈಕಿ ಒಬ್ಬರು ಅಕ್ಷಯ ಲಮಾಣಿ ಈಜಿ ದಡ ಸೇರಿದ್ದಾರೆ. ಆದರೆ ಜೊತೆಯಲ್ಲಿದ್ದ ಪರಶುರಾಮ ಲಮಾಣಿ(35) ಮತ್ತು ರಮೇಶ ಲಮಾಣಿ(38) ಇಬ್ಬರು ನಾಪತ್ತೆಯಾಗಿದ್ದಾರೆ. ಮೂವರಲ್ಲಿ ಒಬ್ಬರು ದಡ ಸೇರಿದ್ದು, ಮತ್ತಿಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರ ಎಂಬ […]

ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ, ಮುಂದುವರೆದ ಶೋಧ ಕಾರ್ಯ
Follow us
ಆಯೇಷಾ ಬಾನು
|

Updated on:Jun 12, 2020 | 2:12 PM

ವಿಜಯಪುರ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಂಜೆ ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ತೆರಳಿದ್ದರು. ಈ ವೇಳೆ ಗಾಳಿ ಸಹಿತ ಭಾರಿ ಮಳೆಗೆ ತೆಪ್ಪ ಮಗುಚಿ ಬಿದ್ದಿತ್ತು.

ಮೂವರ ಪೈಕಿ ಒಬ್ಬರು ಅಕ್ಷಯ ಲಮಾಣಿ ಈಜಿ ದಡ ಸೇರಿದ್ದಾರೆ. ಆದರೆ ಜೊತೆಯಲ್ಲಿದ್ದ ಪರಶುರಾಮ ಲಮಾಣಿ(35) ಮತ್ತು ರಮೇಶ ಲಮಾಣಿ(38) ಇಬ್ಬರು ನಾಪತ್ತೆಯಾಗಿದ್ದಾರೆ. ಮೂವರಲ್ಲಿ ಒಬ್ಬರು ದಡ ಸೇರಿದ್ದು, ಮತ್ತಿಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರ ಎಂಬ ಶಂಕೆ ವ್ಯಕ್ತವಾಗಿದೆ. ಕೊಲ್ಹಾರ ತಹಶೀಲ್ದಾರ ಎಂ.ಎಸ್ ಭಾಗವಾನ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಇಬ್ಬರಿಗೆ ಶೋಧ ಕಾರ್ಯ ಮುಂದುವರೆದಿದೆ.

Published On - 8:06 am, Fri, 12 June 20