
ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೋಕಿನ ಕುದುರುಗೆರೆ ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗ ಮೂಲದ ದಿಗಂತ (20) ಹಾಗೂ ಚಿನ್ಮಯ (19) ಮೃತ ಬೈಕ್ ಸವಾರರು.
ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 11:35 am, Tue, 24 November 20