ಚಿತ್ರದುರ್ಗ: ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಯಾದಗಿರಿ ಮೂಲದ ಐಶ್ವರ್ಯಾ(12), ಮತ್ತೊಬ್ಬರ ಸಾವಾಗಿದೆ.
ಯಾದಗಿರಿ ಜಿಲ್ಲೆ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಹಿರಿಯೂರು ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಾಯಗಳಾಗಿವೆ. ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.