ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ ಕೆ.ಬಿ.ಹೊಸಹಳ್ಳಿ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಶ್ರೀನಿವಾಸ್(28) ಹಾಗೂ ಬೆಂಗಳೂರಿನ ಯಲಹಂಕ ಮೂಲದ ಭರತ್ (31) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಬಡವೇ ಕಂಪನಿಯಲ್ಲಿ ಕೆಲಸ ಮುಗಿಸಿ ಸವಾರರು ವಾಪಸ್ ಆಗುವ ವೇಳೆ ಘಟನೆ ಸಂಭಿವಿಸಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಸಂಬಂಧಿಸಿ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

Updated on: Aug 13, 2020 | 6:37 PM

ಕೋಲಾರ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ ಕೆ.ಬಿ.ಹೊಸಹಳ್ಳಿ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಶ್ರೀನಿವಾಸ್(28) ಹಾಗೂ ಬೆಂಗಳೂರಿನ ಯಲಹಂಕ ಮೂಲದ ಭರತ್ (31) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ.

ಬಡವೇ ಕಂಪನಿಯಲ್ಲಿ ಕೆಲಸ ಮುಗಿಸಿ ಸವಾರರು ವಾಪಸ್ ಆಗುವ ವೇಳೆ ಘಟನೆ ಸಂಭಿವಿಸಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಸಂಬಂಧಿಸಿ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.