ನಿಂತಿದ್ದ ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಬೀದರ್: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ತಂದೆ, ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮನ್ನಾಖೇಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ತಂದೆ ಹಾಗೂ ಮಕ್ಕಳಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಾರು ಚಾಲಕ ಹಾಗೂ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ತಂದೆ, ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮನ್ನಾಖೇಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ತಂದೆ ಹಾಗೂ ಮಕ್ಕಳಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಾರು ಚಾಲಕ ಹಾಗೂ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಉಳಿದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮನ್ನಾಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:37 am, Tue, 6 October 20




