ಬೆಂಗಳೂರು: ಮಹಾಮಾರಿ ಕೊವಿಡ್ 19ಕಣ್ಣು ಬೆಂಗಳೂರಿನ ಮೇಲೆ ಬಿದ್ದಿದೆ. ಕಿಲ್ಲರ್ ಕೊರೊನಾಗೆ ಸಿಲಿಕಾನ್ ಸಿಟಿಯಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 60 ವರ್ಷದ ಇಬ್ಬರು ವೃದ್ಧೆಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜೂ.9 ಮತ್ತು ಜೂ 10ರಂದು ಇಬ್ಬರು ಮೃತ ಸೋಂಕಿತರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಲಿದೆ. ನಿನ್ನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇಂದು ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಏರುತ್ತಲೇ ಇದೆ. ಮುಂದೆ ಇನ್ನು ಯಾವ ರೀತಿಯ ಪರಿಸ್ಥತಿ ಎದುರಾಗುತ್ತೋ?
Published On - 7:13 am, Fri, 12 June 20