ಮದುವೆ ಮುಗಿಸಿ ತೆರಳುವಾಗ ಮೈಲಿಗಲ್ಲಿಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ

ಗದಗ: ರಸ್ತೆ ಬದಿಯ ಮೈಲಿಗಲ್ಲಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಮುಂಡರಗಿ ತಾಲೂಕಿನ ಬರದೂರ ಗ್ರಾಮದ ಬಳಿ ನಡೆದಿದೆ. ಅಡವಿಸೋಮಾಪುರ ಗ್ರಾಮದ ಪ್ರಕಾಶ್(18), ನಾಗರಹಳ್ಳಿ ಗ್ರಾಮದ ರೇಣುಕಾ(48) ಮೃತ ದುರ್ದೈವಿಗಳು. ಅಡವಿಸೋಮಾಪುರ ಗ್ರಾಮದಲ್ಲಿ ಮದುವೆ ಮುಗಿಸಿ ನಾಗರಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ನಾಗರಹಳ್ಳಿ ಗ್ರಾಮದ 20 ವರ್ಷದ ಕವಿತಾಗೆ ಗಂಭೀರ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ತೆರಳುವಾಗ ಮೈಲಿಗಲ್ಲಿಗೆ ಬೈಕ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​ Edited By:

Updated on: May 25, 2020 | 10:02 AM

ಗದಗ: ರಸ್ತೆ ಬದಿಯ ಮೈಲಿಗಲ್ಲಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಮುಂಡರಗಿ ತಾಲೂಕಿನ ಬರದೂರ ಗ್ರಾಮದ ಬಳಿ ನಡೆದಿದೆ. ಅಡವಿಸೋಮಾಪುರ ಗ್ರಾಮದ ಪ್ರಕಾಶ್(18), ನಾಗರಹಳ್ಳಿ ಗ್ರಾಮದ ರೇಣುಕಾ(48) ಮೃತ ದುರ್ದೈವಿಗಳು.

ಅಡವಿಸೋಮಾಪುರ ಗ್ರಾಮದಲ್ಲಿ ಮದುವೆ ಮುಗಿಸಿ ನಾಗರಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ನಾಗರಹಳ್ಳಿ ಗ್ರಾಮದ 20 ವರ್ಷದ ಕವಿತಾಗೆ ಗಂಭೀರ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us