ಖಾಸಗಿ ಬಸ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು..

ಖಾಸಗಿ ಬಸ್ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು..

ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

ಲಿಂಗದಹಳ್ಳಿಯ ಅಮೃತ ಮಹಲ್​ ಸಮೀಪ ಈ ದುರ್ಘಟನೆ ನಡೆದಿದ್ದು, ಕಿರಣ್(26), ನಾಗರಾಜ ನಾಯ್ಕ್(30) ಮೃತ ಬೈಕ್​ ಸವಾರರಾಗಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Click on your DTH Provider to Add TV9 Kannada