ಮೈಸೂರು: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮೈಸೂರಿನ ತಾಲೂಕು ಕಚೇರಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗನನ್ನು ಬಂಧಿಸಿದೆ.
ಅಧಿಕಾರಿಗಳ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಅನಿಲ್ ಕುಮಾರ್ ಮತ್ತು ಗ್ರಾಮ ಲೆಕ್ಕಿಗನನ್ನು ಸತೀಶ್ ಎಂದು ಗುರುತಿಸಲಾಗಿದೆ. ಜಮೀನಿನ ಖಾತೆ ಮಾಡಿಕೊಡಲು ಇವರಿಬ್ಬರೂ ₹ 30,000 ಲಂಚ ಪಡೆಯುತ್ತಿದ್ದರು ಎಂದು ದೂರಲಾಗಿದೆ. ಎಸಿಬಿ ಡಿಎಸ್ಪಿ ಪರಶುರಾಮಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ.. ಮೊಳಕಾಲ್ಮೂರು ತಹಶೀಲ್ದಾರ್ ACB ಬಲೆಗೆ