ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಕೇನಹಳ್ಳಿ ಬಳಿ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನ ಚಾಲಕ ದೇವರಾಜ್ (30) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಇರಕಸಂದ್ರ ಮೂಲದವರು. ಕಾರಿನಲ್ಲಿದ್ದ ರಾಕೇಶ್ ಎಂಬಾತನಿಗೆ ನಡೆದ ಅಪಘಾತದಲ್ಲಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಬಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ 4ರ ನವಯುಗ ಟೋಲ್ ಬಳಿ ಅಪಘಾತ:
ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ತಮಿಳುನಾಡು ಮೂಲದ ಲಾರಿ ಚಾಲಕನಾದ ಸತೀಶ್ಗೆ (35) ಗಂಭೀರ ಗಾಯವಾಗಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಾಲಕ ಚಿಕಿತ್ಸೆ ಪಡೆಯುತ್ತಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಊರಿಗೆ ಹೋಗಿದ್ದಾಗ.. ತೋಟದ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧನ ಹತ್ಯೆ