AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಮೆಗಾ ವಂಚನೆ: ಇಬ್ಬರು ಅರೆಸ್ಟ್​, ಪ್ರಮುಖ ಆರೋಪಿ ನಾಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಫಾರಿನ್ ಟ್ರೇಡ್, ಬುಲಿಯನ್ಸ್‌ನಲ್ಲಿ ಹೂಡಿಕೆ ನೆಪದಲ್ಲಿ TTSPL ಕಂಪನಿ ನೂರಾರು ಜನರಿಗೆ ವಂಚನೆ ಮಾಡಿದೆ. ಈ ಸಂಬಂಧ ಇಬ್ಬರು ಆರೋಪಿಗಳ ಬಂಧನವಾಗಿದ್ದು ಪ್ರಮುಖ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ: 2018ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಹಬಿಬುಲ್ಲಾ ಎಂಬುವನು ಕಂಪನಿ ಆರಂಭಿಸಿದ್ದ. ಈ ಹಿಂದೆ ಹಬಿಬುಲ್ಲಾ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಕಂಪನಿ ಶುರುಮಾಡುತ್ತಿದ್ದಂತೆ ಹೆಚ್ಚಿನ ಲಾಭಾಂಶದ ಆಸೆ […]

ಮತ್ತೊಂದು ಮೆಗಾ ವಂಚನೆ: ಇಬ್ಬರು ಅರೆಸ್ಟ್​, ಪ್ರಮುಖ ಆರೋಪಿ ನಾಪತ್ತೆ
ಸಾಧು ಶ್ರೀನಾಥ್​
|

Updated on:Jan 25, 2020 | 1:59 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಫಾರಿನ್ ಟ್ರೇಡ್, ಬುಲಿಯನ್ಸ್‌ನಲ್ಲಿ ಹೂಡಿಕೆ ನೆಪದಲ್ಲಿ TTSPL ಕಂಪನಿ ನೂರಾರು ಜನರಿಗೆ ವಂಚನೆ ಮಾಡಿದೆ. ಈ ಸಂಬಂಧ ಇಬ್ಬರು ಆರೋಪಿಗಳ ಬಂಧನವಾಗಿದ್ದು ಪ್ರಮುಖ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ: 2018ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಹಬಿಬುಲ್ಲಾ ಎಂಬುವನು ಕಂಪನಿ ಆರಂಭಿಸಿದ್ದ. ಈ ಹಿಂದೆ ಹಬಿಬುಲ್ಲಾ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಕಂಪನಿ ಶುರುಮಾಡುತ್ತಿದ್ದಂತೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ನೂರಾರು ಮಂದಿಯಿಂದ ಹಣ ಹೂಡಿಕೆ ಮಾಡಿಸಿಕೊಂಡಿದ್ದಾನೆ. ಸಾರ್ವಜನಿಕರು 10 ಕೋಟಿಗೂ ಅಧಿಕ ಹಣ ಹೂಡಿಕೆ ಮಾಡಿದ್ದರು. ಬೆಂಗಳೂರಿನ ಜಯನಗರದ 9ನೇ ಹಂತದಲ್ಲಿರುವ TTSPL ಕಂಪನಿ, ಹೂಡಿಕೆದಾರರಿಗೆ ಆರಂಭದಲ್ಲಿ ಲಾಭಾಂಶ ನೀಡಿತ್ತು.

ಐದಾರು ತಿಂಗಳಿಂದ ಹಣ ನೀಡಿದೆ ಕಂಪನಿ ಗ್ರಾಹಕರಿಗೆ ವಂಚನೆ ಮಾಡಿದೆ. ಈ ಬಗ್ಗೆ ನೊಂದ ಹೂಡಿಕೆದಾರರು ತಿಲಕನಗರ ಪೊಲೀಸ್ ಠಾಣೆಗೆ ಸಾಲು ಸಾಲು ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ 1.75 ಕೋಟಿ ರೂ. ವಂಚನೆಯಾದ ಬಗ್ಗೆ ಸದ್ಯ 40 ಮಂದಿ ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಆರೋಪಿ ನಾಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಮಂಜುನಾಥ್, ಮಸಿವುಲ್ಲಾ ಷರೀಫ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 80 ಲಕ್ಷ ರೂ. ಮೌಲ್ಯದ ಒಂದು BMW ಕಾರು, 32 ಲಕ್ಷ ಮೌಲ್ಯದ ಮತ್ತೊಂದು ಐಷಾರಾಮಿ ಕಾರು, 15 ಲಕ್ಷ ಮೌಲ್ಯದ ಕಾರು ಮತ್ತು ಒಂದು ಬಂಗಲೆ ಜಪ್ತಿ ಮಾಡಿದ್ದಾರೆ. ಪ್ರಮುಖ ಆರೋಪಿ ಹಬಿಬುಲ್ಲಾ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಹಬಿಬುಲ್ಲಾಗಾಗಿ ತಿಲಕ್ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 1:41 pm, Sat, 25 January 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ