AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್​ ಹೋಗಿದ್ದ ಗರ್ಭಿಣಿಯ ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಕೊಯ್ದ ದುಷ್ಕರ್ಮಿಗಳು

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಕತ್ತು ಕೊಯ್ದು ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಚ್ಚೆಯ ಲಕ್ಷ್ಮೀನಗರದಲ್ಲಿ ಬೆಳಕಿಗೆ ಬಂದಿದೆ. ಬಡಾವಣೆಯ ರಸ್ತೆಯ ಮೇಲೆ ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದ್ದು ಅದರಲ್ಲಿ ಓರ್ವ ಮಹಿಳೆ 5 ತಿಂಗಳ ಗರ್ಭಿಣಿಯಾಗಿದ್ದರು ಎಂದು ಹೇಳಲಾಗಿದೆ. ಮೃತ ಮಹಳೆಯರನ್ನು ರಾಜಶ್ರೀ ರವಿ ಬನ್ನೂರ್(21) ಮತ್ತು ರೋಹಿಣಿ ಗಂಗಪ್ಪ ಹುಲಿಮನಿ(21) ಎಂದು ಗುರುತಿಸಲಾಗಿದೆ. ಮೃತರು ಕಾಳೇವಾಡಿ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಮಹಿಳೆಯರು ವಾಕಿಂಗ್‌ಗೆ ಎಂದು ಮಚ್ಚೆಯ ಲಕ್ಷ್ಮೀನಗರದಲ್ಲಿರುವ ಬ್ರಹ್ಮದೇವರ […]

ವಾಕಿಂಗ್​ ಹೋಗಿದ್ದ ಗರ್ಭಿಣಿಯ ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಕೊಯ್ದ ದುಷ್ಕರ್ಮಿಗಳು
KUSHAL V
|

Updated on: Sep 26, 2020 | 6:41 PM

Share

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ಕತ್ತು ಕೊಯ್ದು ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಚ್ಚೆಯ ಲಕ್ಷ್ಮೀನಗರದಲ್ಲಿ ಬೆಳಕಿಗೆ ಬಂದಿದೆ. ಬಡಾವಣೆಯ ರಸ್ತೆಯ ಮೇಲೆ ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದ್ದು ಅದರಲ್ಲಿ ಓರ್ವ ಮಹಿಳೆ 5 ತಿಂಗಳ ಗರ್ಭಿಣಿಯಾಗಿದ್ದರು ಎಂದು ಹೇಳಲಾಗಿದೆ. ಮೃತ ಮಹಳೆಯರನ್ನು ರಾಜಶ್ರೀ ರವಿ ಬನ್ನೂರ್(21) ಮತ್ತು ರೋಹಿಣಿ ಗಂಗಪ್ಪ ಹುಲಿಮನಿ(21) ಎಂದು ಗುರುತಿಸಲಾಗಿದೆ. ಮೃತರು ಕಾಳೇವಾಡಿ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.

ಮಹಿಳೆಯರು ವಾಕಿಂಗ್‌ಗೆ ಎಂದು ಮಚ್ಚೆಯ ಲಕ್ಷ್ಮೀನಗರದಲ್ಲಿರುವ ಬ್ರಹ್ಮದೇವರ ದೇವಸ್ಥಾನದ ಬಳಿ ಬಂದಿದ್ದ ವೇಳೆ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂದು ತಿಳಿದು ಬಂದಿಲ್ಲ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಸಹ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Follow Us
KUSHAL V
KUSHAL V
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ