AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ

ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್‌ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ. ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ ಶಿವಪ್ರಸಾದ್ ಆರೋಪಿಸಿದ್ದಾರೆ. ಜೊತೆಗೆ ಮೃತ ಮಹಿಳೆಯ […]

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ
ಆಯೇಷಾ ಬಾನು
|

Updated on: Aug 22, 2020 | 2:03 PM

Share

ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್‌ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ.

ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ ಶಿವಪ್ರಸಾದ್ ಆರೋಪಿಸಿದ್ದಾರೆ.

ಜೊತೆಗೆ ಮೃತ ಮಹಿಳೆಯ ಕೊರೊನಾ ವರದಿಯಲ್ಲೂ ಗೊಂದಲ ಉಂಟಾಗಿದೆ. ಱಪಿಡ್‌ ಟೆಸ್ಟ್‌ನಲ್ಲಿ ವರದಿ ನೆಗೆಟಿವ್ ಬಂದಿದ್ದ ಮಾಹಿತಿ ಇದೆ. ಆದ್ರೆ ತಡರಾತ್ರಿ ಬಂದ ಮತ್ತೊಂದು ವರದಿಯಲ್ಲಿ ಪಾಸಿಟಿವ್ ಬಂದಿದೆ. ವರದಿ ಪ್ರತಿ ಮೇಲೆ ಸರ್ಕಾರಿ ವೈದ್ಯರ ಸಹಿಯೂ ಇಲ್ಲ, ಸೀಲೂ ಇಲ್ಲ. ಪಾಸಿಟಿವ್ ಎಂದು ವರದಿ ಕೊಟ್ಟು ಖಾಸಗಿ ಆಸ್ಪತ್ರೆ ಸೇಫ್ ಆಗುತ್ತಿದೆ ಎಂಬ ಆರೋಪ ಕೂಡ ಮೃತಳ ಪತಿ ಮಾಡಿದ್ದಾರೆ.

ಹೀಗಾಗಿ ಉಡುಪಿ ಜಿಲ್ಲಾಸ್ಪತ್ರೆಯ ಮುಂದೆ ಸಂಬಂಧಿಕರು ಸೇರಿದ್ದಾರೆ. ಪಾಸಿಟಿವ್ ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳ್ತಿದ್ದಾರೆ. ಶವ ಕೊಡಿ ನಾವೇ ಅಂತ್ಯಸಂಸ್ಕಾರ ಮಾಡ್ತೀವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು