ಪದವಿ ಕಾಲೇಜುಗಳ ಆರಂಭ‌: ಆದರೆ ಷರತ್ತುಗಳು ಅನ್ವಯ, ಯಾವ ಜಿಲ್ಲೆಯಲ್ಲಿ?

ದಾವಣಗೆರೆ: ಇದೇ ತಿಂಗಳ 17 ರಿಂದ ದಾವಣಗೆರೆ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪದವಿ ಕಾಲೇಜುಗಳು ಆರಂಭ‌ವಾಗಲಿವೆ. ಸದ್ಯಕ್ಕೆ ಅಂತಿಮ ವರ್ಷದ ಹಾಗೂ ಸ್ನಾತಕೋತ್ತರ ತರಗತಿಗಳು ಮಾತ್ರ ಆರಂಭವಾಗಲಿವೆ ಎಂದು ದಾವಣಗೆರೆ ವಿವಿ ಕುಲಪತಿ ಡಾ. ಶರಣಪ್ಪ ಹಲಸೆ ಮಾಹಿತಿ ನೀಡಿದ್ದಾರೆ. ಆದರೆ ಕಾಲೇಜು ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. ಆಯಾ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಎಂದು ವರದಿ ಬಂದ್ರೆ ಮಾತ್ರ ತರಗತಿಗೆ ಹಾಜರಾಗಲು […]

ಪದವಿ ಕಾಲೇಜುಗಳ ಆರಂಭ‌: ಆದರೆ ಷರತ್ತುಗಳು ಅನ್ವಯ, ಯಾವ ಜಿಲ್ಲೆಯಲ್ಲಿ?
Edited By:

Updated on: Nov 14, 2020 | 3:33 PM

ದಾವಣಗೆರೆ: ಇದೇ ತಿಂಗಳ 17 ರಿಂದ ದಾವಣಗೆರೆ ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪದವಿ ಕಾಲೇಜುಗಳು ಆರಂಭ‌ವಾಗಲಿವೆ.

ಸದ್ಯಕ್ಕೆ ಅಂತಿಮ ವರ್ಷದ ಹಾಗೂ ಸ್ನಾತಕೋತ್ತರ ತರಗತಿಗಳು ಮಾತ್ರ ಆರಂಭವಾಗಲಿವೆ ಎಂದು ದಾವಣಗೆರೆ ವಿವಿ ಕುಲಪತಿ ಡಾ. ಶರಣಪ್ಪ ಹಲಸೆ ಮಾಹಿತಿ ನೀಡಿದ್ದಾರೆ. ಆದರೆ ಕಾಲೇಜು ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ.

ಆಯಾ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ಎಂದು ವರದಿ ಬಂದ್ರೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ದಾವಣಗೆರೆ ವಿವಿ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಪದವಿ ಕಾಲೇಜುಗಳು ಒಳಪಡುತ್ತವೆ.