ಇಂದು ಶುಕ್ರವಾರ, ಸೂಕ್ಷ್ಮತೆ ಅರಿತುಕೊಂಡು ಡ್ಯೂಟಿ ನಿಭಾಯಿಸಿ: DCP ಶರಣಪ್ಪ ಸೂಚನೆ
ಬೆಂಗಳೂರು: ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ನಿರ್ಲಕ್ಷಕ್ಕೆ ಇಲ್ಲಿ ಅವಕಾಶ ಇಲ್ಲವೆಂದು ಪೂರ್ವ ವಿಭಾಗದ ಡಿಸಿಪಿ ಡಾ. ಎಸ್.ಡಿ. ಶರಣಪ್ಪ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ. ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕರ್ತವ್ಯ ನಿರ್ವಹಿಸುತ್ತಿರುವ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿರುವ ಶರಣಪ, ಸಿಬ್ಬಂದಿಗಳು ನೆನ್ನೆ ದಿನ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ನಿಷೇಧಾಜ್ಞೆ ಇದೆ; ಪ್ರಾರ್ಥನೆಗೆ ಅವಕಾಶವಿರುವುದಿಲ್ಲ ಹಾಗೆಯೇ, ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಶಿಸ್ತಿನಿಂದ ಕರ್ತವ್ಯ ನಿರ್ವಹಿಸಿ, ನಾವು […]

ಬೆಂಗಳೂರು: ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೂಕ್ಷ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ನಿರ್ಲಕ್ಷಕ್ಕೆ ಇಲ್ಲಿ ಅವಕಾಶ ಇಲ್ಲವೆಂದು ಪೂರ್ವ ವಿಭಾಗದ ಡಿಸಿಪಿ ಡಾ. ಎಸ್.ಡಿ. ಶರಣಪ್ಪ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕರ್ತವ್ಯ ನಿರ್ವಹಿಸುತ್ತಿರುವ ಇಲಾಖಾ ಸಿಬ್ಬಂದಿಗಳಿಗೆ ಸೂಚನೆ ನೀಡಿರುವ ಶರಣಪ, ಸಿಬ್ಬಂದಿಗಳು ನೆನ್ನೆ ದಿನ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.
ನಿಷೇಧಾಜ್ಞೆ ಇದೆ; ಪ್ರಾರ್ಥನೆಗೆ ಅವಕಾಶವಿರುವುದಿಲ್ಲ ಹಾಗೆಯೇ, ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಶಿಸ್ತಿನಿಂದ ಕರ್ತವ್ಯ ನಿರ್ವಹಿಸಿ, ನಾವು ಒಂದು ದೊಡ್ಡ ಕುಟುಂಬವಿದ್ದಂತೆ ಹಾಗಾಗಿ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇದು ನಿಮ್ಮ ಲಿಮಿಟ್ಸ್ ಅಲ್ಲದೆ ಹೋದರು ಸಹ ಒಗ್ಗಟ್ಟಾಗಿ ಕೆಲಸ ಮಾಡಿ ಎಂದಿದ್ದಾರೆ.
ನಾವೆಲ್ಲರೂ ಖಾಕಿಯ ಹೆಮ್ಮೆಯನ್ನು ಉಳಿಸಿಕೊಳ್ಳಬೇಕು. ಜೊತೆಗೆ ಇಂದು ಶುಕ್ರವಾರ ಆಗಿರುವುದರಿಂದ ಮುಸ್ಲಿಂ ಸಮುದಾಯದ ಜನರಿಗೆ ಪ್ರಾರ್ಥನೆ ಇದೆ, ಆದರೆ ಹಿಂಸಾಚಾರ ಪ್ರಕರಣದಿಂದ ಈ 2 ಏರಿಯಾಗಳಲ್ಲಿ 144 ಸೆಕ್ಷನ್ ಜಾರಿ ಇದೆ. ಹೀಗಾಗಿ ಪ್ರಾರ್ಥನೆಗೆ ಯಾವುದೇ ಅವಕಾಶವಿರುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬೀಸುವಂತಿಲ್ಲಾ ಎಂದು ಸಿಬ್ಬಂದಿ ಇಲಾಖೆಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
Published On - 11:48 am, Fri, 14 August 20