ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ತಿಂದು ಗರ್ಭಿಣಿ ಕಾಡಾನೆ ಸಾವಿಗೀಡಾಗಿತ್ತು. ಕಿಡಿಗೇಡಿಗಳು ಅನಾನಸ್ ಹಣ್ಣಿನಲ್ಲಿ ಪಟಾಕಿ ಇಟ್ಟು ಗರ್ಭಿಣಿ ಆನೆಯನ್ನು ಕೊಂದಿದ್ದರು. ಪಾಪಿಗಳ ನೀಚ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಸಾಯಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ದನಗಳು ನುಗ್ಗುತ್ತವೆಂದು ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದಾರೆ. ವಿಷಪೂರಿತ ಹಲಸಿನ ಹಣ್ಣು ತಿಂದು ಕಿಟ್ಟೆಗೌಡ, ಮಧು ಎಂಬುವರಿಗೆ ಸೇರಿದ ಮೂರು ದನಗಳು ಸಾವಿಗೀಡಾಗಿವೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 10:26 am, Tue, 9 June 20