
ಕಲಬುರಗಿ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿ ನಡೆದಿದೆ. ಭೀಮಾಶಂಕರ್ (30), ಅಕ್ಬರ್ ಪಟೇಲ್ (28) ಮತ್ತು 18 ವರ್ಷದ ಯುವತಿಯೊಬ್ಬಳು ಸ್ಥಳದಲ್ಲೇ ಮರಣ ಹೊಂದಿದ್ದಾರೆ.
ರಾವೂರ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಇವರಲ್ಲಿ ಭೀಮಾಶಂಕರ್ ಮತ್ತು ಅಕ್ಬರ್ ಪಟೇಲ್ ರಾವೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ