ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

TV9 Digital Desk

| Edited By: guruganesh bhat

Updated on:Sep 02, 2021 | 5:58 PM

ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎಲ್ಲರಿಗೂ ಕೊವಿಡ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ
ಕೇಂದ್ರ ಗೃಹ ಸಚಿವ ಅಮಿತ್ ಶಾ

Follow us on

ದಾವಣಗೆರೆ: ಯಾರಾದರೂ ಹೊಸಬರು ಮುಖ್ಯಮಂತ್ರಿಯಾಗಲಿ ಆಗಲಿ ಎಂದು ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿದ್ದಾರೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದರು. ಅದರಂತೆಯೇ ಬಸವರಾಜ ಬೊಮ್ಮಾಯಿ ಅವರೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಸ್ಪಷ್ಟ ಬಹುಮತಗಳಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಮುಂಬರುವ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎಲ್ಲರಿಗೂ ಕೊವಿಡ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ದಾವಣಗೆರೆಯಲ್ಲಿ ಇಂದು 3 ಯೋಜನೆ ಉದ್ಘಾಟಿಸಿದ್ದೇನೆ. ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ. ಕೊರೊನಾ ಮಹಾಮಾರಿ ಮಾನವ ಕುಲಕ್ಕೆ ಆತಂಕವಾಗಿದೆ. ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊವಿಡ್ ವಿರುದ್ಧ ಸರ್ಕಾರದ ಜತೆ ಜನರೂ ಹೋರಾಡಿದ್ದಾರೆ. ಇಡೀ ಜಗತ್ತೆ ಈ ಮಹಾಮಾರಿಗೆ ತತ್ತರಿಸಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಲಸಿಕೆ ನೀಡಿದ ದೇಶ ಭಾರತ. ಒಂದೇ ದಿನ 1.43 ಕೋಟಿ ಜನರಿಗೆ ಲಸಿಕೆ ನೀಡಿದ್ದೇವೆ. ಕರ್ನಾಟಕದಲ್ಲಿ 5 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ.90ರಷ್ಟು ಜನರಿಗೆ ಲಸಿಕೆ ವಿತರಿಸುತ್ತೇವೆ ಎಂದು ಅವರು ಘೋಷಿಸಿದರು.

ಇದನ್ನೂ ಓದಿ: 

ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರ ಮೇಲೆ ಯಾವುದೇ ನಿಬಂಧನೆ ಹೇರುವಂತಿಲ್ಲ: ರಾಜ್ಯ ಸರ್ಕಾರದಿಂದ ಸೂಚನೆ

ದೇಶದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕೇಂದ್ರದ ಸಹಕಾರ ಇಲಾಖೆ ವ್ಯಾಪ್ತಿಗೆ ತರುವುದಿಲ್ಲ: ಅಮಿತ್ ಶಾ

(Union Home Minister Amit Shah says will face next election in the leadership of CM Basavaraj Bommai)

ತಾಜಾ ಸುದ್ದಿ

Related Stories

Click on your DTH Provider to Add TV9 Kannada