ಕೇಂದ್ರ ಸಚಿವ ಸುರೇಶ್ ಅಂಗಡಿ ಕೊವಿಡ್-19 ಸೋಂಕಿಗೆ ಬಲಿ

|

Updated on: Sep 23, 2020 | 10:36 PM

ಕರ್ನಾಟಕದ ಪ್ರಮುಖ ಬಿಜೆಪಿ ನಾಯಕ ಮತ್ತು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕೊವಿಡ್-19 ಸೋಂಕಿನಿಂದ ಬಳಲುತ್ತಿದ್ದ ಅಂಗಡಿಯವರು ಕಳೆದ10 ದಿನಗಳಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ವೆಂಟಿಲೇಟರ್‌ನಲ್ಲಿ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ವೆಂಟಿಲೇಟರ್‌ ತೆಗೆದು ಚಿಕಿತ್ಸೆ ಮುಂದುವರಿಸಲಾಗಿತ್ತು. ಆಸ್ಪತ್ರೆ ಮೂಲಗಳ ಪ್ರಕಾರ ಇಂದು ಬೆಳಗ್ಗೆ ಸುರೇಶ್ ಅಂಗಡಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು, ವೈದ್ಯರ ಭಗೀರಥ […]

ಕೇಂದ್ರ ಸಚಿವ ಸುರೇಶ್ ಅಂಗಡಿ ಕೊವಿಡ್-19 ಸೋಂಕಿಗೆ ಬಲಿ
Follow us on

ಕರ್ನಾಟಕದ ಪ್ರಮುಖ ಬಿಜೆಪಿ ನಾಯಕ ಮತ್ತು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಕೊವಿಡ್-19 ಸೋಂಕಿನಿಂದ ಬಳಲುತ್ತಿದ್ದ ಅಂಗಡಿಯವರು ಕಳೆದ10 ದಿನಗಳಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ವೆಂಟಿಲೇಟರ್‌ನಲ್ಲಿ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ವೆಂಟಿಲೇಟರ್‌ ತೆಗೆದು ಚಿಕಿತ್ಸೆ ಮುಂದುವರಿಸಲಾಗಿತ್ತು.

ಆಸ್ಪತ್ರೆ ಮೂಲಗಳ ಪ್ರಕಾರ ಇಂದು ಬೆಳಗ್ಗೆ ಸುರೇಶ್ ಅಂಗಡಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು, ವೈದ್ಯರ ಭಗೀರಥ ಪ್ರಯತ್ನದ ಹೊರತಾಗಿಯೂ ಅವರು ಉಳಿಯಲಿಲ್ಲ. ಅಂಗಡಿಯವರು ಪತ್ನಿ, ಇಬ್ಬರು ಹೆಣ್ಣುಮಕ್ಕಳು, ಅಪಾರ ಬಂಧು-ಬಳಗ, ಸ್ನೇಹಿತರು ಹಾಗೂ ಬೆಂಬಲಿಗರನ್ನು ಅಗಲಿದ್ದಾರೆ.

ಶ್ರೀಯುತರ ಸಾವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.