ಲಾರಿ ಚಕ್ರದಡಿ ಸಿಲುಕಿ ಬೈಕ್ ಸವಾರ ಸಾವು, ಎಲ್ಲಿ?
ಧಾರವಾಡ: ಲಾರಿ ಚಕ್ರದಡಿ ಸಿಲುಕಿ ಅಪರಿಚಿತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡದ ನವಲೂರು ಬಡಾವಣೆ ಬಳಿ ಈ ಘಟನೆ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದು, ಬೈಕ್ ಸವಾರನ ಜೊತೆಯಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಧಾರವಾಡ […]

ಧಾರವಾಡ: ಲಾರಿ ಚಕ್ರದಡಿ ಸಿಲುಕಿ ಅಪರಿಚಿತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡದ ನವಲೂರು ಬಡಾವಣೆ ಬಳಿ ಈ ಘಟನೆ ಸಂಭವಿಸಿದೆ.

ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದು, ಬೈಕ್ ಸವಾರನ ಜೊತೆಯಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಧಾರವಾಡ ಟ್ರಾಫಿಕ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.




