
ಕಲಬುರಗಿ: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆಗೈದಿರುವ ಘಟನೆ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ನಗರದ ಯಾದುಲ್ಲಾ ಕಾಲೋನಿ ನಿವಾಸಿ ಮೊಹಮ್ಮದ್ ಗೌಸುದ್ದೀನ್(42) ಎಂದು ತಿಳಿದುಬಂದಿದೆ.
ಗೌಸುದ್ದೀನ್ ಪಾರ್ಟ್ನರ್‌ಗಳಾದ ಫಯಾಜ್, ನಿಜಾಮ್ ಮತ್ತು ವಾಜಿದ್ ವಿರುದ್ಧ ಅಪಹರಣ ಮತ್ತು ಕೊಲೆಯ ಆರೋಪ ಕೇಳಿಬಂದಿದೆ. ಸದ್ಯ, ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.